ಸುದ್ದಿ

MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

174

ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.

ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಪ್ರಕಾಶ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಇಂದು ಕೋರ್ಟ್ ಗೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಂಸದರಿಗೆ ಅನೇಕ ಬಾರಿ ಸಮನ್ಸ್ ನೀಡಲಾಗಿತ್ತು. ಆದರೂ

ಪ್ರತಾಪ್ ಸಿಂಹ ಹಲವು ಬಾರಿ ಕೋರ್ಟ್ ಗೆ ಹಾಜರಾಗದೇ ಇದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • ಜ್ಯೋತಿಷ್ಯ

    ಶ್ರೀ ಚಾಮುಂಡೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…