ಸುದ್ದಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

By admin

February 22, 2019

ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ.

ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಕೆಎಸ್‍ಆರ್ ಟಿಸಿ ನಿಗಮದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಮಾರ್ಚ್ 1 ರಿಂದ 18 ರವೆಗೆ ಮಾತ್ರ ಈ ಸೌಲಭ್ಯವಿರುತ್ತದೆ ಎಂದು ಕೆಎಸ್‍ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆ ಮುಗಿದ ಬಳಿಕ ಮತ್ತೆ ಅಲ್ಲಿಂದ ವಾಸಸ್ಥಳಕ್ಕೆ ಹಿಂದಿರುಗಬಹುದು. ವಿದ್ಯಾರ್ಥಿಗಳು ಬಸ್ ಹತ್ತಿದ ಮೇಲೆ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿದರೆ ಉಚಿತವಾಗಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.