ಸಿನಿಮಾ

ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

668

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.

ಗುರುವಾರ ಸ್ಯಾಂಡಲ್‍ವುಡ್ ಸ್ಟಾರ್ ಗಳ ಮನೆಗೆ ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಇಂದೂ ಮಂದುವರಿದಿದೆ. ಆದರೆ ಅಚ್ಚರಿ ಎಂಬಂತೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದರು.

ಪುನೀತ್ ರಾಜ್‍ಕುಮಾರ್ ಮನೆ ಬಳಿಯೇ ಸಚಿವರು ತಮ್ಮ ಕಾರಿನಿಂದ ಇಳಿದಿದ್ದಾರೆ. ಬಳಿಕ ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ. ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ಬಹುಕೋಟಿ ಸಿನಿಮಾ ಮಾಡುವ ನಿರ್ಮಾಪಕರ ಮನೆಗಳ ಮೇಲೂ ಐಟಿ ರೇಡ್ ಮಾಡಿದ್ದರು. ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ದಾಳಿ, ರಾತ್ರಿ 11 ಗಂಟೆವರೆಗೂ ಮುಂದುವರಿದಿತ್ತು. ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಡುಗಿಸಿದ ಐಟಿ ದಾಳಿಗೆ ಹೈ ಬಜೆಟ್ಟಿನ ಮೂರು ಸಿನಿಮಾಗಳೇ ಕಾರಣ ಎನ್ನಲಾಗಿದೆ.



About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ