ಸಿನಿಮಾ

ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

191

ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು.

ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು.

ಹುಬ್ಬಳ್ಳಿ ಜನರ ‌ಪ್ರೀತಿ ಹಾಗೂ ಸಾವಜೀ ಹೋಟೆಲ್ ಮಾಂಸದೂಟ ಮರೆಯಲು ಸಾಧ್ಯವೇ ಎಂದಾಗ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ನಟಸಾರ್ವಭೌಮ ಚೆನ್ನಾಗಿ‌ ಮೂಡಿಬಂದಿದೆ. ಜನರು ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದು ಪವರ್​​ ಸ್ಟಾರ್​ ಹೇಳಿದ್ರು.

ಇದಕ್ಕು ಮುನ್ನ ಕಾರ್ಯಕ್ರಮಕ್ಕೆ ತೆರಳುವಾಗ, ಏಕೆ ಈ ಕಾರ್ಯಕ್ರಮವನ್ನು ಹುಬ್ಬಳಿಯ ಲ್ಲೇ ಮಾಡುತ್ತಿದ್ದೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ನಮಗೆ ಕರ್ನಾಟಕ ಎಲ್ಲಾ ಒಂದೇ. ನಾವು ಎಲ್ಲಾ ಜಾಗದಲ್ಲೂ ಕಾರ್ಯಕ್ರಮ ಮಾಡಿದ್ದೇವೆ. ಹುಬ್ಬಳ್ಳಿಯಲ್ಲೂ ಮಾಡುತ್ತಿದ್ದೇವೆ, ಮುಂದೆ ಬೇರೆ ಕಡೆಯೂ ಮಾಡುತ್ತೇವೆ. ಇದರಲ್ಲಿ ವಿಶೇಷ ಏನಿಲ್ಲ ಎಂದರು.

ಅಭಿಮಾನಿಗಳು ನನ್ನ ಈ ಚಿತ್ರವನ್ನು ಮೆಚ್ಚುತ್ತಾರೆ ಎಂದು ನನಗೆ ನಂಬಿಕೆ ಇದೆ. ಅಭಿಮಾನಿ ದೇವರುಗಳೇ ನನಗೆ ಎಲ್ಲಾ ಎಂದರು. ಐಟಿ ಬಗ್ಗೆ ಮಾತನಾಡಿದ ಅವರು ನಾನು ಎಲ್ಲಾ ತೆರಿಗೆ ಕಟ್ಟಿದ್ದೇನೆ. ತನಿಖೆಗೆ ಬೇಕಾದ ಎಲ್ಲಾ ಸಹಕಾರ ನೀಡಲು ಸಿದ್ದವಾಗಿದ್ದೇನೆ ಎಂದರು. ಮತ್ತು ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…