ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ.
ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಕಲಾವಿದ ಮಲ್ಲಪ್ಪ ಅವರು ಲೋಕಾಪುರದ ಮೊರಾರ್ಜಿ ಶಾಲೆಯಲ್ಲಿ ಪತ್ನಿ ಲಕ್ಷ್ಮಿ ಮತ್ತು ಮಕ್ಕಳೊಂದಿಗೆ ಕ್ವಾರಂಟೈನ್ ಆಗಿದ್ದರು. ಪತ್ನಿಯನ್ನು ಕರೆದುಕೊಂಡು ಬರಲು ಮಹಾರಾಷ್ಟ್ರದ ರತ್ನಗಿರಿಗೆ ತೆರಳಿ ಮರಳಿ ಬರುವಾಗ ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದರು. ಆಗ ಮಲ್ಲಪ್ಪ ಅವರ ಕೋರಿಕೆಯಂತೆ ಶಿಲ್ಪಕಲೆಯ ಕೇಂದ್ರದಲ್ಲಿ ಕಲ್ಲು ಹಾಗೂ ಉಳಿಯನ್ನು ತಂದುಕೊಟ್ಟಿದ್ದರು.
ಆಗ ಎರಡೆನೆಯ ದಿನದಂದು ತಮ್ಮ ಕೆಲಸವನ್ನು ಪ್ರಾರಂಭಿಸಿದರು. ಕ್ವಾರಂಟೈನ್ ಜೂ. 1 ರಂದು ಪೂರ್ಣವಾಗುತ್ತಿದ್ದಂತೆ ಗಣೇಶನ ವಿಗ್ರಹ ರೆಡಿಯಾಗಿತ್ತು. ಅಧಿಕಾರಿಗಳು ಭರವಸೆ ನೀಡಿದಂತೆ ಈ ವಿಗ್ರಹವನ್ನು 10 ಸಾವಿರಕ್ಕೆ ಖರೀದಿಸಿದ್ದಾರೆ. ಈ ವಿಗ್ರಹವನ್ನು ನೋಡಿದ ಜಿಲ್ಲಾ ಪಂಚಾಯಿತಿ ಸಿಇಒ ಗಂಗೂಬಾಯಿ ಮಾನಕರ, ಗೌತಮ ಬುದ್ಧನ ಮೂರ್ತಿಗೆ ಆರ್ಡರ್ ನೀಡಿದ್ದಾರೆ.
ಮಲ್ಲಪ್ಪನವರು ಉತ್ತಮ ಕಲಾವಿದ ಎಂದು ನಮಗೆ ಗೊತ್ತಿತ್ತು ಆದ್ದರಿಂದ ಅವರ ಬೇಡಿಕೆಯಂತೆ ಕಲ್ಲು ಮತ್ತು ಉಳಿಯನ್ನು ತಂದುಕೊಟ್ಟಿದ್ದವು ಎಂದಿದ್ದಾರೆ. ಮಲ್ಲಪ್ಪನವರು 14 ದಿನಗಳಲ್ಲಿ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು ಪಂಚಾಯಿತಿಯವರು ಖರೀದಿ ಮಾಡಿದ್ದಾರೆ. ನನ್ನ ಕಲೆಗೆ ಅವಕಾಶ ಹಾಗೂ ಬೆಲೆ ದೊರೆತಿದ್ದಕ್ಕೆ ಖುಷಿಯಾಗಿದೆ. ನನಗೆ ಈಗ ಮತ್ತಷ್ಟು ಬೇಡಿಕೆ ಬಂದಿದೆ ಎನ್ನುತ್ತಾರೆ ಮಲ್ಲಪ್ಪ ಬಡಿಗೇರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….