ಆರೋಗ್ಯ

ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

By admin

December 04, 2019

ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ರಾಗಿ ಗಂಜಿಯ ಉಪಯೋಗಗಳು.

ಕ್ಯಾನ್ಸರ್‌ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.

ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.

ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.

ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್‌ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.