ಸುದ್ದಿ

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

By admin

April 08, 2019

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.