ಸುದ್ದಿ

ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

79

ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ.

ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ.

ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ.

ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ ಸಿಗ್ನಲ್ ನೀಡಿದ್ದಕ್ಕಾಗಿ ಸಂಬಂಧಪಟ್ಟ ಸ್ಟೇಷನ್ ಮಾಸ್ಟರ್ ರನ್ನು ಅಮಾನತು ಮಾಡಲಾಗಿದ್ದು ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಈ ಘಟನೆಯಲ್ಲಿ ಸೀನಿಯರ್ ಸೆಕ್ಷನ್ ಎಂಜಿನಿಯರ್ ಸಾಗರ್, ಟೆಕ್ನಿಷಿಯನ್ ಗೌರಿ ನಾಯ್ಡು ಮತ್ತು ಸುರೇಶ್ ಜೀವ ಕಳೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ