ಸುದ್ದಿ

ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

51

ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.

ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್‌ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್‌ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್‌ಗಳನ್ನು ಐಆರ್‌ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್‌ಸಿಟಿಸಿ ಪಾವತಿ ಮಾಡಲಿದೆ.

ಪ್ರಯೋಗ ಯಶಸ್ವಿಯಾದರೆ ಬಿಡ್‌: ಐಆರ್‌ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್‌ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.

ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್‌ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್‌ಶಾಪ್‌ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್‌ ರೈಲ್ವೇಸ್‌ ರೋಲಿಂಗ್‌ ಸ್ಟಾಕ್‌ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್‌ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.

ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್‌ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್‌ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನಿ ಮೋದಿ ರೈತರ ಸಾಲ ಮನ್ನಾ ಮಾಡ್ತರಾ ಗೊತ್ತಿಲ್ಲ?ಆದರೆ ರೈತರ ನೆರವಿಗೆ ಅವರು ಏನ್ ಮಾಡ್ತಾರೆ ಗೊತ್ತಾ..?

    ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ‌ ಕೇಂದ್ರ ಸರ್ಕಾರ ರೈತರ ಸಾಲ‌ಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ‌ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ‌ ಮೋದಿ ವಿವಿಧ ಸುತ್ತಿನ‌ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…

  • ರಾಜಕೀಯ

    ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

    ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.