ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ.

ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಭರ್ಜರಿ ಜಯದ ಮೂಲಕ ಈ ಹಿಂದೆ ಇಂದಿರಾಗಾಂಧಿ ಮತ್ತು ಜವಹಾರ್ ಲಾಲ್ ನೆಹರೂ ಅವರು ನಿರ್ಮಿಸಿದ್ದ ದಾಖಲೆಯನ್ನು ಮೋದಿ ಸರಿಗಟ್ಟಿದ್ದಾರೆ. ಅಲ್ಲದೆ ದೇಶಾದ್ಯಂತ ಮೋದಿ ಜಯದ ವಿಜಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವು 2014ರ ಲೋಕಸಭಾ ಚುನಾವಣಾ ಜಯವನ್ನೂ ಮೀರಿಸಿದೆ. ಆ ಮೂಲಕ ಪ್ರಧಾನಿ ಮೋದಿ ದೇಶದ ರಾಜಕೀಯ ಇತಿಹಾಸದಲ್ಲೇ ಅಪೂರ್ವ ಸಾಧನೆ ಗೈದಿದ್ದು, ಸ್ವಂತ ಬಲದಿಂದಲೇ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ದೇಶದ ಮೂರನೇ ಪ್ರಧಾನಿಯಾಗಿದ್ದಾರೆ.ಅಲ್ಲದೆ ಈ ಸಾಧನೆಗೈದ ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೂ ಮೋದಿ ಭಾಜನರಾಗಿದ್ದಾರೆ. 1971ರ ನಂತರ ಯಾವ ಪ್ರಧಾನಿ ಕೂಡ ಸತತ 2ನೇ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರಲಿಲ್ಲ. ಆದರೆ ಮೋದಿ ಮೋಡಿಗೆ ಇಡೀ ದೇಶವೇ ಮನಸೋತಿದ್ದು, ಭರ್ಜರಿ ಬಹುಮತ ನೀಡಿ ಮತ್ತೆ ಮೋದಿ ಪ್ರಧಾನಿ ಸ್ಥಾನದಲ್ಲಿ ಆಡಳಿತ ನಡೆಸಲು ಅವಕಾಶ ಮಾಡಿಕೊಡಲಾಗಿದೆ.

1971ರಲ್ಲಿ ಇಂದಿರಾ ಗಾಂಧಿ ಅವರು ಸತತ ಎರಡನೇ ಬಾರಿ ಬಹುಮತದೊಂದಿಗೆ ಪ್ರಧಾನಿಯಾಗಿದ್ದರು. 1971ರ ನಂತರ ಕಾಂಗ್ರೆಸ್ ಪಕ್ಷ ಸತತವಾಗಿ ಅಧಿಕಾರಕ್ಕೆ ಬಂದಿತ್ತಾದರೂ ಪ್ರಧಾನಿಗಳು ಬದಲಾಗಿದ್ದರು. 2004 ರಿಂದ 2009 ಮತ್ತು 2009ರಿಂದ 2014ರವರೆಗೂ ಮನಮೋಹನ್ ಸಿಂಗ್ ಸತತ ಎರಡು ಬಾರಿ ಪ್ರಧಾನಿಯಾದರೂ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇಲ್ಲದಿದ್ದ ಕಾರಣಕ್ಕೆ ಮೈತ್ರಿಕೂಟದ ಸಹಾಯದಿಂದ ಸರ್ಕಾರ ರಚನೆ ಮಾಡಲಾಗಿತ್ತು. ಆದರೆ ಇದೀಗ 48 ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದ್ದು, ಈ ಹಿಂದೆ ಇಂದಿರಾಗಾಂಧಿ ಮತ್ತು ನೆಹರು ಮಾಡಿದ್ದ ಈ ಸಾಧನೆಯನ್ನು ಪ್ರಧಾನಿ ಮೋದಿ ಮಾಡಿ ತೋರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…