ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ.
ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಭರ್ಜರಿ ಜಯದ ಮೂಲಕ ಈ ಹಿಂದೆ ಇಂದಿರಾಗಾಂಧಿ ಮತ್ತು ಜವಹಾರ್ ಲಾಲ್ ನೆಹರೂ ಅವರು ನಿರ್ಮಿಸಿದ್ದ ದಾಖಲೆಯನ್ನು ಮೋದಿ ಸರಿಗಟ್ಟಿದ್ದಾರೆ. ಅಲ್ಲದೆ ದೇಶಾದ್ಯಂತ ಮೋದಿ ಜಯದ ವಿಜಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವು 2014ರ ಲೋಕಸಭಾ ಚುನಾವಣಾ ಜಯವನ್ನೂ ಮೀರಿಸಿದೆ. ಆ ಮೂಲಕ ಪ್ರಧಾನಿ ಮೋದಿ ದೇಶದ ರಾಜಕೀಯ ಇತಿಹಾಸದಲ್ಲೇ ಅಪೂರ್ವ ಸಾಧನೆ ಗೈದಿದ್ದು, ಸ್ವಂತ ಬಲದಿಂದಲೇ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ದೇಶದ ಮೂರನೇ ಪ್ರಧಾನಿಯಾಗಿದ್ದಾರೆ.ಅಲ್ಲದೆ ಈ ಸಾಧನೆಗೈದ ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೂ ಮೋದಿ ಭಾಜನರಾಗಿದ್ದಾರೆ. 1971ರ ನಂತರ ಯಾವ ಪ್ರಧಾನಿ ಕೂಡ ಸತತ 2ನೇ ಬಾರಿಗೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರಲಿಲ್ಲ. ಆದರೆ ಮೋದಿ ಮೋಡಿಗೆ ಇಡೀ ದೇಶವೇ ಮನಸೋತಿದ್ದು, ಭರ್ಜರಿ ಬಹುಮತ ನೀಡಿ ಮತ್ತೆ ಮೋದಿ ಪ್ರಧಾನಿ ಸ್ಥಾನದಲ್ಲಿ ಆಡಳಿತ ನಡೆಸಲು ಅವಕಾಶ ಮಾಡಿಕೊಡಲಾಗಿದೆ.
1971ರಲ್ಲಿ ಇಂದಿರಾ ಗಾಂಧಿ ಅವರು ಸತತ ಎರಡನೇ ಬಾರಿ ಬಹುಮತದೊಂದಿಗೆ ಪ್ರಧಾನಿಯಾಗಿದ್ದರು. 1971ರ ನಂತರ ಕಾಂಗ್ರೆಸ್ ಪಕ್ಷ ಸತತವಾಗಿ ಅಧಿಕಾರಕ್ಕೆ ಬಂದಿತ್ತಾದರೂ ಪ್ರಧಾನಿಗಳು ಬದಲಾಗಿದ್ದರು. 2004 ರಿಂದ 2009 ಮತ್ತು 2009ರಿಂದ 2014ರವರೆಗೂ ಮನಮೋಹನ್ ಸಿಂಗ್ ಸತತ ಎರಡು ಬಾರಿ ಪ್ರಧಾನಿಯಾದರೂ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಇಲ್ಲದಿದ್ದ ಕಾರಣಕ್ಕೆ ಮೈತ್ರಿಕೂಟದ ಸಹಾಯದಿಂದ ಸರ್ಕಾರ ರಚನೆ ಮಾಡಲಾಗಿತ್ತು. ಆದರೆ ಇದೀಗ 48 ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿ ಹೊಸ ಇತಿಹಾಸ ಸೃಷ್ಟಿಸಿದ್ದು, ಈ ಹಿಂದೆ ಇಂದಿರಾಗಾಂಧಿ ಮತ್ತು ನೆಹರು ಮಾಡಿದ್ದ ಈ ಸಾಧನೆಯನ್ನು ಪ್ರಧಾನಿ ಮೋದಿ ಮಾಡಿ ತೋರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…