inspirational

ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

47

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ.

ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು. ಬಹಿರಂಗವಾಗಿ ಇದನ್ನು ಚರ್ಚೆ ಮಾಡಲು ಸಾಧ್ಯವಿಲ್ಲ. ಒಂದು ಸೀಟು ಬಂದಿದ್ದು ನಾವು ಒಪ್ಪಿಕೊಂಡಿದ್ದೇವೆ ಜನರ ತೀರ್ಪು ನಾವು ತಲೆ ಭಾಗಿ ಒಪ್ಪಿಕೊಂಡಿದ್ದೇವೆ ಅಂದರು.

ಸಭೆಯ ಅಜೆಂಡಾ ಇನನೂ ಏನು ಎಂದು ಗೊತ್ತಾಗಿಲ್ಲ. ಯಾವೆಲ್ಲಾ ವಿಚಾರಗಳು ಚರ್ಚೆ ಆಗಲಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಪಕ್ಷೇತರ ಶಾಸಕ ಶಂಕರ್ ಬೆಂಗಳೂರಿನಿಂದ ದೆಹಲಿಗೆ ಆಗಮಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರು ಪಕ್ಷೇತರ ಶಾಸಕರನ್ನು ಹಿಡಿದಿಟ್ಟು ಕೊಳ್ಳುವ ಯತ್ನ ನಡೆಸಿದ್ದು, ಬಿಜೆಪಿ ಆಪರೇಷನ್ ತಪ್ಪಿಸೋಕೆ ಅವರು ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ