ಸುದ್ದಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

27

ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.


ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್ ನಾಥ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಪಕ್ಷ ತೊರೆಯಲು ಒಬ್ಬರಿಗೆ 50 ಕೋಟಿಯ ಆಫರ್ ನೀಡಲಾಗಿದೆ ಎಂದು ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿ ನಾಯಕರು ಯಾವೆಲ್ಲ ಆಫರ್ ನೀಡುತ್ತಿದ್ದಾರೆ ಎಂಬುವುದು ಗೊತ್ತಿಲ್ಲ ಎಂದರು. ಬಿಜೆಪಿ ಮಾತ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ವಾದವನ್ನು ಮಂಡಿಸುತ್ತಿದೆ.


2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 230 ಕ್ಷೇತ್ರಗಳ ಪೈಕಿ 114ರಲ್ಲಿ ಗೆಲುವಿನ ನಗೆ ಬೀರಿತ್ತು. ಬಿಜೆಪಿ 109, ಬಹುಜನ ಸಮಾಜ ಪಾರ್ಟಿ 2 ಮತ್ತು ಸಮಾಜವಾದಿ ಪಾರ್ಟಿ 1, ನಿರ್ದಲಿಯ ಪಕ್ಷ 4 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಬಿಎಸ್‍ಪಿ ಬೆಂಬಲ ಪಡೆದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.