ಸುದ್ದಿ

ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

96

ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ .

ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ, ದೇವಾಲಯದ ತಾಣವು ಸಾಟಿಯಿಲ್ಲದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿರುವ ಈ ರಾಮ ಮಂದಿರವು ಧರ್ಮಸ್ಥಳಕ್ಕೆ ಹೋದಾಗ ಭೇಟಿ ನೀಡಲೇ ಬೇಕಾದ ತಾಣವಾಗಿದೆ.

ರಾಮ ನೆಲೆಸಿದ್ದ ಸ್ಥಳ : ಪುರಾಣದ ಪ್ರಕಾರ, ಭಗವಾನ್ ರಾಮನು ‘ಸೀತಾನ್ವೇಷಣೆ ’ ಅಂದರೆ ಸೀತೆಯನ್ನು ಹುಡುಕುತ್ತಿದ್ದ ಸಮಯದಲ್ಲಿ ಸ್ವಲ್ಪ ಕಾಲ ಇಲ್ಲಿಯೇ ಇದ್ದರು. ನಂತರ ಪ್ರಸಿದ್ಧ ಆಧ್ಯಾತ್ಮಿಕ ನಾಯಕ ಮತ್ತು ಯೋಗ ಗುರುಗಳಾಗಿದ್ದ ವಿಶೇಷ ದೈವಿಕ ಶಕ್ತಿಗಳನ್ನು ಹೊಂದಿದ್ದ ನಿತ್ಯಾನಂದ ಸ್ವಾಮಿ ಅವರು ತಮ್ಮ ಧರ್ಮಸ್ಥಳ ಯಾತ್ರೆಯ ಸಂದರ್ಭದಲ್ಲಿ ಇಲ್ಲಿ ಉಳಿದುಕೊಂಡಿದ್ದರು ಆಗ ಅವರು ಇಲ್ಲಿ ರಾಮನ ಮಂದಿರ ನಿರ್ಮಾಣವಾಗ ಬೇಕೆಂದು ಭಾವಿಸಿದ್ದರು.

ಯಾರು ನಿರ್ಮಿಸಿದ್ದು? : 1978 ರ ವರೆಗೆ ಇಲ್ಲಿ ಬರೀ ಒಂದು ನಿತ್ಯಾನಂದ ಆಶ್ರಮವನ್ನು ಹೊರತುಪಡಿಸಿ ಬೇರೇನೂ ಇರಲಿಲ್ಲ.1978 ರಲ್ಲಿ ಬೆಂಗಳೂರಿನ ಶ್ರೀ ಬಾಲಾ ಶಿವಯೋಗಿ ಮಹಾರಾಜ್ ಅವರು ರಾಮ ಮಂದಿರಕ್ಕೆ ಅಡಿಪಾಯ ಹಾಕಿದರು. ನಂತರ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಎರಡು ಎಕರೆ ಭೂಮಿಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಿದರು.2007 ರಲ್ಲಿ ಮಂದಿರದ ‘ಪ್ರತಿಷ್ಠ ಬ್ರಹ್ಮಕಲಾಶೋತ್ಸವ’ವನ್ನು 45 ದಿನಗಳ ಕಾಲ ನಡೆಸಲಾಯಿತು.

ಯಾವಾಗ ಭೇಟಿ ನೀಡುವುದು ಸೂಕ್ತ
ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಧರ್ಮಸ್ಥಳವು ಅತ್ಯಂತ ಅನುಕೂಲಕರ ಹವಾಮಾನವನ್ನು ಹೊಂದಿರುತ್ತದೆ. ಹೀಗಾಗಿ, ಹೆಚ್ಚಿನ ಪ್ರವಾಸಿಗರು ಈ ಅವಧಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಾರೆ.

ತಲುಪುವುದು ಹೇಗೆ?
ದೇವಾಲಯವು ಮಂಜುನಾಥ ದೇವಸ್ಥಾನದಿಂದ ಪೂರ್ವಕ್ಕೆ3.5 ಕಿ.ಮೀ ದೂರದಲ್ಲಿರುವ ಬೆಳ್ತಂಡಿಗೆ ಹೋಗುವ ಮಾರ್ಗದಲ್ಲಿದೆ. ಕನ್ಯಾಡಿ ಶ್ರೀ ರಾಮ ಕ್ಷೇತ್ರವು ಮಂಗಳೂರಿನಿಂದ 74ಕಿಲೋಮೀಟರ್ ದೂರದಲ್ಲಿದೆ. ಮಂಗಳೂರು – ಧರ್ಮಸ್ಥಳ ರಸ್ತೆಯಲ್ಲಿರುವ ಧರ್ಮಸ್ಥಳಕ್ಕೆ ಕೇವಲ 4 ಕಿಲೋಮೀಟರ್ ದೂರದಲ್ಲಿರುವ ಕಾರಣ ಈ ಸ್ಥಳಕ್ಕೆ ಭೇಟಿ ನೀಡುವುದು ಅಷ್ಟೊಂದು ಕಷ್ಟವೇನಲ್ಲ. ಸ್ಥಳೀಯ ಬಸ್ಸುಗಳು ಮತ್ತು ಟ್ಯಾಕ್ಸಿಗಳು ಶ್ರವಣ ಬೆಳಗೋಳದವರೆಗೆ ಸುಲಭವಾಗಿ ಲಭ್ಯವಿವೆ, ಇದು ಹತ್ತಿರದ ಜನಪ್ರಿಯ ಪ್ರವಾಸಿ ತಾಣವಾಗಿದೆ. ಆದ್ದರಿಂದ, ರಾಮ ಮಂದಿರವನ್ನು ನಗರದ ಎಲ್ಲಾ ಭಾಗಗಳಿಂದ ಸುಲಭವಾಗಿ ಪ್ರವೇಶಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

    ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!

  • ಸುದ್ದಿ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಸುದ್ದಿ

    ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

    ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…