ಸುದ್ದಿ

ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

51

ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ.

”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,”

ಕಳೆದ ಮಾರ್ಚ್‌ನಲ್ಲಿ ರಾಮಲಲ್ಲಾ ವಿಗ್ರಹವನ್ನು ತಾತ್ಕಲಿಕ ಮಂದಿರಕ್ಕೆ ಸ್ಥಳಾಂತರಿಸಲಾಗಿತ್ತು. ಮೇ 11ರಂದು ಸಮತಟ್ಟುಗೊಳಿಸುವ ಕಾಮಗಾರಿ ಆರಂಭಿಸಿದ್ದು, ಆ ವೇಳೆ ಹಲವು ಶಿವಲಿಂಗ ಹಾಗೂ ಹಲವು ವಿಗ್ರಹಗಳು ಪತ್ತೆಯಾಗಿದ್ದವು. ಟ್ರಸ್ಟ್‌ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ ದಾಸ್‌ ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ರಾಮನವಮಿಯಂದೇ (ಏ.22) ಶಿಲಾನ್ಯಾಸ ನೆರವೇರಿಸಲು ನಿರ್ಧರಿಸಲಾಗಿತ್ತಾದರೂ, ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲಾಗಿತ್ತು.

ತಲಾ 16 ಅಡಿ ಎತ್ತರದ 424 ಕೆತ್ತನೆಯ ಕಂಬಗಳನ್ನು ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತದೆ. ಮಂದಿರದ ಆವರಣದಲ್ಲಿ ಸೀತಾ ರಸೋಯಿ (ಪಾಕಶಾಲೆ), ಧರ್ಮಶಾಲೆ, ಭಜನಾ ಮಂದಿರ, ರಂಗಮಂಟಪಗಳು ಇರಲಿವೆ. ಗರ್ಭಗುಡಿ ಹಾಗೂ ಗೋಪುರವನ್ನು ವಿಶೇಷವಾಗಿ ರೂಪಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ