ಸುದ್ದಿ

ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

88

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ.

ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ ಟ್ವೀಟ್ ಗಳು? ಎಲ್ಲೋಯ್ತು ನಿಮ್ಮ ಆಧಾರವಿಲ್ಲದ ಆರೋಪಗಳು? ಅದಕ್ಕೆ ಹೇಳೋದು ಇನ್ನೊಬ್ಬರ ಬಗ್ಗೆ ಆಪಾದನೆ ಮಾಡೋ ಮೊದಲು ತಮ್ಮ ಬಗ್ಗೆ ತಮಗೆ ತಿಳಿದಿರಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಮೋದಿ ವಿರುದ್ಧ ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕುತ್ತಿದ್ದ ರಮ್ಯಾಗೆ ಶಿಲ್ಪಾ ಗಣೇಶ್ ತರಾಟೆಗೆ ತೆಗೆದುಕೊಳ್ಳುತ್ತಿರುವುದು ಇದೇ ಮೊದಲೆನಲ್ಲ. ಪದೇ ಪದೇ ಈ ಫೋಟೋಶಾಪ್ ಬಳಸಿ ತಿರುಚಿದ ಫೋಟೋ ಬಳಿಸಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವುದು ನಿಗೆ ಶೋಭೆ ನೀಡುವುದಿಲ್ಲ ಎಂದು ಟ್ವೀಟಿಸಿದ್ದರು.

ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅದ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ ಟ್ವೀಟ್ಗಳು? ಎಲ್ಲೋಯ್ತು ನಿಮ್ಮ ಆಧಾರವಿಲ್ಲದ ಆರೋಪಗಳು?
ಅದಕ್ಕೆ ಹೇಳೋದು ಇನ್ನೊಬ್ಬರ ಬಗ್ಗೆ ಆಪಾದನೆ ಮಾಡೋ ಮೊದಲು ತಮ್ಮ ಬಗ್ಗೆ ತಮಗೆ ತಿಳಿದಿರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ