ಸುದ್ದಿ

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

30

ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ.

ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ ಹಿಡಿದು ಎಳೆದಿದ್ದೀರಿ. ಈ ರೀತಿ ಕೈ ಹಾಕುವುದು ಸರಿನಾ? ಏನಿದೆಲ್ಲಾ? ಎಂದು ಮಹಿಳೆ ಮೇಲೆ ರೇಗಾಡುತ್ತಾರೆ. ರಾನು ಅವರ ವರ್ತನೆನೋಡಿ ಮಹಿಳೆ ನಗುವ ಮೂಲಕ ಸುಮ್ಮನಾಗುತ್ತಾರೆ.

ಈ ವಿಡಿಯೋ ಈಗ ವೈರಲ್  ಆಗುತ್ತಿದ್ದು, ಕಮೆಂಟ್ ಮಾಡುವ ಮೂಲಕ ನೆಟ್ಟಿಗರು ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಕೆಲವರು, ‘ರಾನುಗೆ ಈಗ ಅಹಂಕಾರ ಬಂದಿದೆ’ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ‘ರಾನು ಮೊಂಡಲ್ ಅವರ ಆ್ಯಟಿಟ್ಯೂಡ್ ನೋಡಿ’ಎಂದು ಕಮಂಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ರಾನು 1972ರಲ್ಲಿ ಬಿಡುಗಡೆಯಾದ `ಶೋರ್’ ಚಿತ್ರದ ಖ್ಯಾತ ಗಾಯಕಿ ಲತಾಮಂಗೇಶ್ಕರ್ ಅವರು ಹಾಡಿದ “ಏಕ್ಪ್ಯಾರ್ ಕಾ ನಗ್ಮಾ ಹೇ” ಚಿತ್ರದ ಹಾಡನ್ನು ಹಾಡುತ್ತಿದ್ದ ವಿಡಿಯೋವೈರಲ್ ಆಗಿತ್ತು. ಈ ವಿಡಿಯೋವನ್ನು ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆದ ಬೆನ್ನಲೇ ರಾನು ಅವರಿಗೆ ರಿಯಾಲಿಟಿ ಶೋನಲ್ಲಿ ಹಾಡುವ ಅವಕಾಶ ಸಿಕ್ಕಿತ್ತು. ಬಳಿಕ ಗಾಯಕ ಹಿಮೇಶ್ ರೇಶ್ಮಿಯಾ ಅವರು ತಮ್ಮ ಚಿತ್ರದಲ್ಲಿ ಹಾಡಲು ರಾನು ಅವರಿಗೆ ಅವಕಾಶ ಕೊಟ್ಟಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.