ಸುದ್ದಿ

ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

199

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

ಭಾನುವಾರ ಸಂಜೆ ಐದು ಆರೋಪಿಗಳ ವಿರುದ್ಧ ಸಂತ್ರಸ್ತೆ ಬಂದು ದೂರು ದಾಖಲಿಸಿದ್ದಾರೆ. ಅವರ ವಿರುದ್ಧ ಗ್ಯಾಂಗ್‍ರೇಪ್, ದೌರ್ಜನ್ಯ ಮತ್ತು ಐಪಿಸಿ ಸೆಕ್ಷನ್ ವಿಭಾಗಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕಿಶೋರ್ ಸಿಂಗ್ ಭಾಟಿ ಹೇಳಿದರು.

ನಾಲ್ಕು ಆರೋಪಿಗಳಾದ ಜಿತೇಂದ್ರ ಭಟ್ (20), ಗೋವಿಂದ್ ಭಟ್ (20), ದಿನೇಶ್ ಭಟ್ (24) ಮತ್ತು ಮಹೇಂದ್ರ ಭಟ್ (22) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸಂಜಯ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.ಸದ್ಯಕ್ಕೆ ಆರೋಪಿಗಳನ್ನು ವಿಚಾರಣೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತೆಯ ಪತಿ ಕಾರ್ಮಿಕನಾಗಿ ಕೆಲಸ ಮಾಡುತ್ತಾನೆ ಎಂದು ಭಾಟಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆ ಎಲೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷದಿ ಗುಣ.!ತಿಳಿಯಲು ಈ ಲೇಖನ ಓದಿ..

    ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.