ಸುದ್ದಿ

ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

By admin

June 04, 2019

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

ಭಾನುವಾರ ಸಂಜೆ ಐದು ಆರೋಪಿಗಳ ವಿರುದ್ಧ ಸಂತ್ರಸ್ತೆ ಬಂದು ದೂರು ದಾಖಲಿಸಿದ್ದಾರೆ. ಅವರ ವಿರುದ್ಧ ಗ್ಯಾಂಗ್‍ರೇಪ್, ದೌರ್ಜನ್ಯ ಮತ್ತು ಐಪಿಸಿ ಸೆಕ್ಷನ್ ವಿಭಾಗಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕಿಶೋರ್ ಸಿಂಗ್ ಭಾಟಿ ಹೇಳಿದರು.

ನಾಲ್ಕು ಆರೋಪಿಗಳಾದ ಜಿತೇಂದ್ರ ಭಟ್ (20), ಗೋವಿಂದ್ ಭಟ್ (20), ದಿನೇಶ್ ಭಟ್ (24) ಮತ್ತು ಮಹೇಂದ್ರ ಭಟ್ (22) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸಂಜಯ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.ಸದ್ಯಕ್ಕೆ ಆರೋಪಿಗಳನ್ನು ವಿಚಾರಣೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತೆಯ ಪತಿ ಕಾರ್ಮಿಕನಾಗಿ ಕೆಲಸ ಮಾಡುತ್ತಾನೆ ಎಂದು ಭಾಟಿ ತಿಳಿಸಿದ್ದಾರೆ.