ಸುದ್ದಿ

ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

By admin

November 20, 2019

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ.

ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಆಸೆ ಇದೆ. ಈಗ ನನಗೆ ದೊಡ್ಡ ನಟರ ಜೊತೆ ನಟಿಸುವ ಅವಕಾಶ ಸಿಕ್ಕಿರುವುದಕ್ಕೆ ನಿಜಕ್ಕೂ ಖುಷಿ ಇದೆ. ನಾನು ಚಿತ್ರಗಳನ್ನು ಮಾತ್ರ ಪ್ರೀತಿಸುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ರಶ್ಮಿಕಾ ಮೇಕಪ್ ಮಾಡಿಕೊಳ್ಳುವುದು ನನಗೆ ಇಷ್ಟವಿಲ್ಲ. ಶೂಟಿಂಗ್ ಇದ್ದಾಗ ಮಾತ್ರ ಮೇಕಪ್ ಮಾಡಿಕೊಳ್ಳುತ್ತೀನಿ. ನಿಜ ಜೀವನದಲ್ಲಿ ನಾನು ಮೇಕಪ್ ಇಲ್ಲದೇ ಇರುತ್ತೇನೆ ಎಂದು ತಿಳಿಸಿದ್ದಾರೆ.

ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಚಿತ್ರರಂಗದಲ್ಲೂ ನಟಿಸುತ್ತಿದ್ದಾರೆ. ಸದ್ಯ ರಶ್ಮಿಕಾ, ಪ್ರಿನ್ಸ್ ಮಹೇಶ್ ಬಾಬು ಅಭಿನಯದ ‘ಸರಿಲೇರು ನಿಕ್ಕೇವರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ನಿತಿನ್ ಅಭಿನಯದ ‘ಭೀಷ್ಮಾ’ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ.