ಸುದ್ದಿ

ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

57

ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯ ಆಗಿಲ್ಲ. ಈ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿರುವ ರಶ್ಮಿಕಾ ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಚಿತ್ರತಂಡದ ಜೊತೆಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಇದು ಅಲ್ಲು ಅರ್ಜುನ್ ನಟನೆಯ 20ನೇ ಸಿನಿಮಾವಾಗಿದೆ. ‘ರಂಗಸ್ಥಳಂ’ ನಂತರ ಸುಕುಮಾರ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಮೊದಲ ಬಾರಿಗೆ ಸ್ಟೈಲಿಷ್ ಸ್ಟಾರ್ ಜೊತೆಗೆ ತೆರೆ ಹಂಚಿಕೊಳ್ಳುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ.

ಮತ್ತೊಂದು ವಿಶೇಷ ಏನೆಂದರೆ, ಸಿನಿಮಾದಲ್ಲಿ ಕಾಲಿವುಡ್ ನಟ ವಿಜಯ್ ಸೇತುಪತಿ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಇದೆ. ಇತ್ತೀಚಿಗೆ ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ನಟಿಸಿದ್ದ ವಿಜಯ್ ಸೇತುಪತಿ ಇದೀಗ ಅಲ್ಲು ಅರ್ಜುನ್ ಜೊತೆ ನಟಿಸುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…