ಸುದ್ದಿ

ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

51

ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು.

ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯ ಆಗಿಲ್ಲ. ಈ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿರುವ ರಶ್ಮಿಕಾ ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಚಿತ್ರತಂಡದ ಜೊತೆಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.

ಇದು ಅಲ್ಲು ಅರ್ಜುನ್ ನಟನೆಯ 20ನೇ ಸಿನಿಮಾವಾಗಿದೆ. ‘ರಂಗಸ್ಥಳಂ’ ನಂತರ ಸುಕುಮಾರ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಮೊದಲ ಬಾರಿಗೆ ಸ್ಟೈಲಿಷ್ ಸ್ಟಾರ್ ಜೊತೆಗೆ ತೆರೆ ಹಂಚಿಕೊಳ್ಳುವ ಅವಕಾಶ ರಶ್ಮಿಕಾಗೆ ಸಿಕ್ಕಿದೆ.

ಮತ್ತೊಂದು ವಿಶೇಷ ಏನೆಂದರೆ, ಸಿನಿಮಾದಲ್ಲಿ ಕಾಲಿವುಡ್ ನಟ ವಿಜಯ್ ಸೇತುಪತಿ ಖಳನಾಯಕನಾಗಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಸುದ್ದಿ ಇದೆ. ಇತ್ತೀಚಿಗೆ ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾದಲ್ಲಿ ನಟಿಸಿದ್ದ ವಿಜಯ್ ಸೇತುಪತಿ ಇದೀಗ ಅಲ್ಲು ಅರ್ಜುನ್ ಜೊತೆ ನಟಿಸುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ