ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ. ಇದರ ಉದ್ದೇಶ ಜನರನ್ನು ಬದುಕಿನಡೆ ನಡೆಯುವಂತೆ ಮಾಡಿದೆ ಎಂದರು.

ಒಬ್ಬರು ಇನ್ನೊಬ್ಬರ ಮೂಲಕ ಕಲಿತು ಬದುಕನ್ನು ಸುಂದರ ಮಾಡಿಕೊಳ್ಳಬೇಕು. ನಾವು ಕಾಯಕಯೋಗಿಗಳಾಗಿ ಕೆಲಸ ಮಾಡಬೇಕು. ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕನ್ನು ಮುನ್ನಡೆಸಬೇಕು ಎಂದರು. ಇಂದು ಸಮಾಜ ಸರಿಯಿಲ್ಲ. ಆದರೆ ಅದನ್ನು ಸರಿ ಮಾಡದೇ ಬಿಡಬಾರದು. ಎಲ್ಲರೂ ತಿಳಿದು ಮುನ್ನಡೆಯಬೇಕು. ಇಲ್ಲಿನ ಪರಂಪರೆ ನೋಡಿದರೆ ಎಲ್ಲವೂ ಜೀವಂತವಾಗಿದೆ ಎಂದೆನಿಸುತ್ತದೆ. ಶ್ರೀಗಳ ಸಂಕಲ್ಪದೊಂದಿಗೆ ಜಾತ್ರೆ ನಡೆದಿದೆ ಎಂದು ಜಾತ್ರೆಯ ಬಗ್ಗೆ ಮಾತನಾಡಿದರು.

ಇಲ್ಲಿನ ಭಕ್ತ ಸಮೂಹ ಯುವಕರು ಸಮಾಜದಲ್ಲಿ ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಆದರೆ ಇಲ್ಲಿನ ಯುವಕರಲ್ಲಿ ಕೀಳರಿಮೆಯ ಭಾವನೆ ತುಂಬಾ ಇದೆ. ತಾನು ಏನು ಮಾಡಿದೆ ಎನ್ನುವುದಕ್ಕಿಂತ ಇನ್ನೊಬ್ಬರ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ. ನಮ್ಮಲ್ಲಿ ಸಂಕಲ್ಪದ ಕೊರತೆ ಕಾಡುತ್ತಿದೆ. ಏನಾದರೂ ಮಾಡು, ಖಾಲಿ ಕೂಡಬೇಡ. ಮಾಡುವ ಕೆಲಸ ಶ್ರದ್ಧೆಯಿಂದ ಮಾಡು. ಕೀಳರಿಮೆ ದೂರವಿಡಬೇಕು ಎಂದರು.

ಪಾಲಕರು ಮಕ್ಕಳಿಗೆ ಸ್ನೇಹಿತರಂತೆ ಕಾಣಬಾರದು. ಅದು ನಿಜಕ್ಕೂ ಕೆಟ್ಟ ಸಂಸ್ಕೃತಿ. ಇದರಿಂದ ಮಕ್ಕಳ ಜೀವನ ಹಾಳಾಗುತ್ತದೆ. ಅವರು ತಪ್ಪು ಮಾಡಿದ ತಕ್ಷಣ ಅದನ್ನು ಅವರಿಗೆ ಮನವರಿಕೆ ಮಾಡಿ ಕೊಡಬೇಕು. ಒಳ್ಳೆಯ ಸಂಸ್ಕಾರ ನಮ್ಮ ಬದುಕನ್ನೇ ಬದಲಿಸಲಿದೆ. ನಾವು ವಯಕ್ತಿಕ ಸಬಲರಾದರೆ ದೇಶವೇ ಅಭಿವೃದ್ಧಿಯಾಗಲಿದೆ ಎಂದು ರವಿ ಚನ್ನಣ್ಣನವರ್ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…