ಕ್ರೀಡೆ

RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

248

ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ.

360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ.

ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ ಬಾಕಿ ಇದ್ದು, ಐಪಿಎಲ್‍ನಿಂದ ದೂರ ಉಳಿಯುತ್ತಾರೆ ಎನ್ನಲಾಗುತ್ತಿದೆ. ಆದರೆ ಮತ್ತೊಂದು ಮಾಹಿತಿಯ ಪ್ರಕಾರ ಐಪಿಎಲ್ ವೇಳೆ ಚೇತರಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಪಾಕಿಸ್ತಾನ್ ಸೂಪರ್ ಲೀಗ್‍ಗೂ ಮುನ್ನ ಬಾಂಗ್ಲಾ ಲೀಗ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಎಬಿಡಿ ಉತ್ತಮ ಪ್ರದರ್ಶನ ನೀಡಿದ್ದರು. ಆದರೆ ಸದ್ಯ ವೈದ್ಯರು ಕನಿಷ್ಠ 2 ವಾರಗಳ ವಿಶ್ರಾಂತಿ ಸೂಚಿಸಿದ್ದು, ಆ ಬಳಿಕಷ್ಟೇ ತರಬೇತಿಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಐಪಿಎಲ್ ನಲ್ಲಿ 4 ಸಾವಿರ ರನ್ ಪೂರ್ಣಗೊಳಿಸಲು ಎಬಿಡಿಗೆ ಇನ್ನು ಕೇವಲ 47 ರನ್ ಗಳ ಅಗತ್ಯವಿದ್ದು, 2008 ರ ಆರಂಭದಿಂದಲೂ ಎಬಿಡಿ ಐಪಿಎಲ್ ಟೂರ್ನಿಯ ಭಾಗವಾಗಿದ್ದಾರೆ. ಇವರೆಗೂ 141 ಪಂದ್ಯಗಳನ್ನು ಆಡಿರುವ ಅವರು 3,953 ರನ್ ಗಳಿಸಿದ್ದಾರೆ. ಕಳೆದ ವರ್ಷದ ಟೂರ್ನಿಯಲ್ಲಿ 12 ಪಂದ್ಯಗಳಿಂದ 480 ರನ್ ಸಿಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…