ಕ್ರೀಡೆ, ಸಿನಿಮಾ

ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

138

ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ.

ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಕೂಡ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಬಗ್ಗೆ ಟ್ವೀಟ್ ಮಾಡಿತ್ತು. ರಾಯಲ್ ಚಾಲೆಂಜರ್ಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಅಣ್ಣಾವ್ರ ಹುಟ್ಟುಹಬ್ಬವನ್ನು ಯಾವ ರೀತಿ ಆಚರಿಸಿದ್ದೇವೆ, ಅಲ್ವಾ?” ಎಂದು ಬರೆದು ಹುಟ್ಟುಹಬ್ಬದ ಶುಭಾಶಯಗಳು ಡಾ. ರಾಜ್‍ಕುಮಾರ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಟ್ವೀಟ್ ಮಾಡಿತ್ತು.

ಇನ್ನೊಂದು ವಿಶೇಷ ಏನೆಂದರೆ ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಆಗಮಿಸಿದರು. ಶಿವರಾಜ್‍ಕುಮಾರ್ ಅವರ ಜೊತೆ ನಿರ್ದೇಶಕ ರಘುರಾಮ್ ಹಾಗೂ ನಿರ್ಮಾಪಕ ಶ್ರೀಕಾಂತ್ ಆಗಮಿಸಿದರು. ಮೂವರು ಪಂದ್ಯವನ್ನು ಸಾಕಷ್ಟು ಎಂಜಾಯ್ ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…