ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.
ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.
ಬಿಎಸ್ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.
ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…