ಸುದ್ದಿ

ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

308

ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ.

ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ ಸಭೆ ನಡೆಸಲಾಗಿತ್ತು.

ಅಲ್ಲದೆ ವಿಶೇಷ ತರಗತಿ ನಡೆಸಲು ಸೂಚಿಸಿದ್ದರು. ಇದೇ ಮುಖ್ಯ ಕಾರಣ ಎಂದು ಹೇಳಿದ್ದಾರೆ.ನಾನು ಸಚಿವನಾದ ಬಳಿಕ ವಿಶೇಷ ತರಬೇತಿ ನಡೆಸಲು ಸೂಚಿಸಿದ್ದೆ ಅದರೆ ಕೆಲವು ಶಾಲೆಗಳಲ್ಲಿ ಭಾನುವಾರವೂ ಶಿಕ್ಷಕರು ತರಗತಿ ಮಾಡಿದ್ದಾರೆ.

ಹಾಸನಕ್ಕೆ ಉತ್ತಮ ಫಲಿತಾಂಶ ಬಂದ ಶಾಲೆಗೆ ಶಿಕ್ಷಕರಿಗೆ ಮುಖ್ಯಮಂತ್ರಿಗಳನ್ನು ಕರೆಸಿ ಸನ್ಮಾನ ಮಾಡುವುದಾಗಿ ಹೇಳಿದ್ದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…