ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.
ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.
ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.
ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.
ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…