ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.
ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.
ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.
ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.
ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಈಗ ಚಳಿಗಾಲ. ಅಂದರೆ ಸಣ್ಣ ಪುಟ್ಟ ಕಾಯಿಲೆಗಳಿಗೆ ಆಹ್ವಾನ ಕೊಡುವ ಕಾಲ. ನೀವು ಬೇಡ ಎಂದರೂ ಅವುಗಳು ಮಾತ್ರ ನಿಮ್ಮನ್ನು ಬಿಡುವುದಿಲ್ಲ. ವರ್ಷ ಪೂರ್ತಿ ಈ ಸಮಯಕ್ಕಾಗಿಯೇ ಹೊಂಚು ಹಾಕಿ ಕಾದು ಕುಳಿತಿರುತ್ತವೆ. ಅಕ್ಟೋಬರ್, ನವೆಂಬರ್ ತಿಂಗಳು ಪ್ರಾರಂಭವಾಗುತ್ತಿದ್ದ ಹಾಗೆ ಮೈಯಲ್ಲಿ ಬೆವರು ಕಡಿಮೆಯಾಗಿ ಮೂಗಿನಲ್ಲಿ ಶೀತ ದ್ರವ ಹರಿಯಲು ಪ್ರಾರಂಭವಾಗುತ್ತದೆ. ಇದನ್ನು ಹಾಗೇ ಬಿಟ್ಟರೆ ಒಂದರ ಹಿಂದೆ ಒಂದು ಕೊಂಡಿಯಂತೆ ಶೀತ, ಕೆಮ್ಮು, ಜ್ವರ ಹೀಗೆ ಒಂದೊಂದಾಗಿ ಬಂದು ಅಂಟಿಕೊಳ್ಳುತ್ತವೆ. ಅಷ್ಟು ದಿನಗಳವರೆಗೆ ಬೆಳಗ್ಗೆ ಎದ್ದು…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.