ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ.
ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ.
ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ ವಾದ ನಡೆದಿದೆ. ಇದನ್ನು ಕೇಳಿಸಿಕೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಭರತ್ ನನ್ನು ಬಂಧಿಸಿ ಕರೆದೊಯ್ದಿದ್ದಾರೆ.
ರಿತಿಕಾ ತಮಿಳಿನಿ ರಾಜಾರಾಣಿ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಡಬ್ ಸ್ಮಾಶ್, ಟಿಕ್ ಟಾಕ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿ ಫುಲ್ ಫೇಮಸ್ ಆಗಿದ್ರು. ರಿತಿಕಾ ನಟನೆಗೆ ಫಿದಾ ಆಗಿದ್ದ ಭರತ್ ಮದುವೆಯಾಗಲು ಮುಂದಾಗಿದ್ದ.