ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ.
ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬೇಡಿ ಎಂದು ಟ್ವೀಟ್ ಮಾಡಿದ್ದಾರೆ. ಇಷ್ಟನ್ನು ಬರೆದು ಅವರು ಸುಮ್ಮನಾಗಿಲ್ಲ. ಸವಾರನೊಬ್ಬ ಗುಂಡಿಯಲ್ಲಿ ಆಯತಪ್ಪಿ ಬೈಕ್ ಸಮೇತ ನೆಲಕ್ಕೆ ಬಿದ್ದಿರುವ ಹಾಗೂ ಆತನನ್ನು ಮಹಿಳೆಯೊಬ್ಬರು ರಕ್ಷಿಸಲು ಮುಂದಾಗುತ್ತಿರುವ ಫೋಟೊವನ್ನೂ ಅಪ್ಲೋಡ್ ಮಾಡಿದ್ದಾರೆ.
ಆ ಫೋಟೊದಲ್ಲಿ ಕುಡಿದು ಚಾಲನೆಗೆ ₹ 10,000, ಜಂಪಿಂಗ್ ಟ್ರಾಫಿಕ್ ಲೈಟ್ಗೆ ₹ 5,000. ಮೊಬೈಲ್ ಫೋನ್ ಬಳಕೆಗೆ ₹ 5,000, ಅತಿವೇಗಕ್ಕೆ ₹ 5,000 ಹಾಗೂ ಸೀಟ್ಬೆಲ್ಟ್ ಧರಿಸದಿದ್ದರೆ ₹ 1,000 ದಂಡ ವಿಧಿಸಲಾಗುತ್ತದೆ. ಸವಾರರಿಗೆ ಗುಂಡಿಗಳಿಂದ ತೊಂದರೆಯಾದರೆ ಹೊಣೆ ಯಾರು? ಆ ಗುಂಡಿಗಳಿಂದ ತೊಂದರೆ ಅನುಭವಿಸುವ ನಾವು ಸರ್ಕಾರಕ್ಕೆ ಎಷ್ಟು ದಂಡ ಹಾಕಬೇಕು? ಎಂದು ಪ್ರಶ್ನಿಸಿದ್ದಾರೆ.
ಸೋನು ಗೌಡ ಕನ್ನಡ ಚಿತ್ರರಂಗ ಪ್ರವೇಶಿಸಿದ್ದು ‘ಇಂತಿ ನಿನ್ನ ಪ್ರೀತಿಯ’ ಚಿತ್ರದ ಮೂಲಕ. ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಈ ಹಿಂದೆ ಸೋನು ನಗರದಲ್ಲಿನ ರಸ್ತೆ ಗುಂಡಿಗಳ ವಿರುದ್ಧ ಮತ್ಸ್ಯಕನ್ಯೆ ವೇಷಧರಿಸಿ ಪ್ರತಿಭಟನೆಯನ್ನೂ ನಡೆಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಮನೆಯಲ್ಲಿನ ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ ಎಲ್ಲಾ ಕೋಣೆಗಳನ್ನು ಸ್ವಚ್ಛಗೊಳಿಸಿ ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.