ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.
ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…