ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.
‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ್ದೇಶಕ ಎಸ್.ಎಸ್. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್ ರೇಸ್ನಲ್ಲಿ ಗೆದ್ದಿದೆ. ‘ಆರ್ಆರ್ಆರ್’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ್ಡ್ ಫಂಕ್ಷನ್ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…