ಸುದ್ದಿ

ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

39

ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. 

ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌
ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು – ಗುಂತಕಲ್ ಮಾರ್ಗದಲ್ಲಿ ಗೀತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….