ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ.
ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ ಮಾಡಲಾಗುತ್ತಿದೆ ಎಂಬ ಅನುಮಾನಗಳು ಮೂಡಿ ಬಂದಿದ್ದು, ಕೆಲವು ವರು ನಿರ್ಮಾಪಕರ ಮೂಲಕ ಕಪ್ಪು ಹಣವನ್ನು ಸಿನಿಮಾದಲ್ಲಿ ಹೂಡಿಕೆ ಮಾಡಲಾಗುತ್ತಿದೆ ಎಂಬ ಅನುಮಾನದ ಮೇರೆಗೆ ಐಟಿ ದಾಳಿ ಮಾಡಲಾಗಿದೆ ಎನ್ನಲಾಗಿದೆ. ಇದಕ್ಕೆ ತುಂಬಾ ದಿನಗಳಿಂದ ಸಿದ್ಧತೆ ನಡೆದಿತ್ತು ಇಂದು ಮುಂಜಾನೆ ಇನ್ಕಮ್ ಟ್ಯಾಕ್ಸ್ ಇಲಾಖೆ ಈ ಸ್ಟಾರ್ ಗಳ ಮನೆ ಮೇಲೆ ದಾಳಿ ನಡೆಸಿದೆ.
ಆದರೆ ಈ ಸ್ಟಾರ್ ನಟರ ಗಳ ಅಭಿಮಾನಿಗಳು ಮಾತ್ರ ರೊಚ್ಚಿಗೆದ್ದಿದ್ದಾರೆ. ಕರ್ನಾಟಕವನ್ನು ಗುರಿಯಾಗಿರಿಸಿಕೊಂಡು ದಾಳಿಯನ್ನು ಮಾಡಲಾಗುತ್ತಿದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ. ಐ ಟಿ ಯು ಕೇಂದ್ರ ಸರ್ಕಾರದಿಂದ ಪೂರ್ವಗ್ರಹಪೀಡಿತ ವಾಗಿದ್ದು ಇದರ ಹಿಂದೆ ಮೋದಿ ಇದ್ದಾರೆ ಎಂದು ಭಾವಿಸಿರುವ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನೀವು ನಮ್ಮ ನೆಚ್ಚಿನ ನಟರ ಗಳನ್ನು ಟಾರ್ಗೆಟ್ ಮಾಡಿದ್ದೀರಿ..ನೋಡುತ್ತಿರಿ ಮುಂದೆ ಬರುವ ಲೋಕಸಭಾ ಚುನಾವಣೆಗೆ ನಾವು ನಿಮ್ಮನ್ನು ಟಾರ್ಗೆಟ್ ಮಾಡುತ್ತೇವೆ ನಿಮಗೆ ಮತ ಹಾಕುವುದಿಲ್ಲ ಬಿಜೆಪಿ ಮುಕ್ತ ಕರ್ನಾಟಕ ವನ್ನು ಮಾಡುತ್ತೇವೆ ಎಂದು ಆಕ್ರೋಶ ಪಟ್ಟಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್ ಅವರು ಐಟಿ ಗೆ ತನ್ನದೇ ಆದ ನಿಯಮ ಗಳು ಇರುತ್ತವೆ ಅದು ಅದನ್ನು ಪಾಲಿಸಿದೇ ಅಷ್ಟೇ. ಕೆಜಿಎಫ್ , ವಿಲ್ಲನ್ ಹಾಗೂ ನಟಸಾರ್ವಭೌಮ ಚಿತ್ರಗಳು ಬಾರಿ ಹೆಸರು ಮಾಡುತ್ತಿದ್ದು ಈ ಚಿತ್ರಕ್ಕೆ ಭಾರಿ ಹಣ ಖರ್ಚು ಮಾಡುವುದರಿಂದ ಈ ಕಾರಣಕ್ಕೆ ಐಟಿ ದಾಳಿ ಆಗಿರಬಹುದು ಸಾಕ್ಷ್ಯಾಧಾರಗಳಿಲ್ಲದೆ ನಾವು ಯಾರನ್ನೂ ದೂರುವುದಿಲ್ಲ, ಐಟಿ ಇಲಾಖೆ ಒಂದು ಪಕ್ಷಕ್ಕೆ ಸೀಮಿತವಾದ ದಲ್ಲ. ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಸ್ಯಾಂಡಲ್ ವುಡ್ ಇತಿಹಾಸದಲ್ಲೇ ಇದು ಬಹು ದೊಡ್ಡ ಐಟಿ ದಾಳಿ ಯಾಗಿದ್ದು.. ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯುತ್ತವೆ , ಮುಂದೆ ಜನರಿಂದ ಇದಕ್ಕೆ ಯಾವ ರೀತಿ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.