ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

113

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ