ಸುದ್ದಿ

ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

19

ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್‍ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್‍ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್‍ಸಿ ಬ್ಯಾಂಕುಗಳು ಸಹ ಎಂಸಿಎಲ್‍ಅರ್ ಕಡಿತಗೊಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ