ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.
ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.
ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್ಗಳು ಹರಸಾಹಸ ಪಡುತ್ತಿದ್ದಾರೆ.
ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.