ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ.
ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.
ಮಹಿಳೆಯರು ಅಯ್ಯಪ್ಪ ಸನ್ನಿದಾನಕ್ಕೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ ಮಾಡಿ ದೇವರ ದರ್ಶನ ಪಡೆದಿದ್ದಾರೆ.
18 ಮೆಟ್ಟಿಲ ಬದಲಿಗೆ ಪರ್ಯಾಯ ಮಾರ್ಗದಲ್ಲಿ ಸನ್ನಿಧಾನ ಏರಿದ ಮಹಿಳೆಯರುಇನ್ನು ಅಯ್ಯಪ್ಪನ ಭಕ್ತರು ಪೂಜ್ಯನೀಯ ಎಂದು ಭಾವಿಸುವ 18 ಮೆಟ್ಟಿಲುಗಳ ಬದಲಿಗೆ ಮಹಿಳೆಯರು ಸನ್ನಿಧಾನಕ್ಕೆ ತೆರಳಲು ಪರ್ಯಾಯ ಮಾರ್ಗದಲ್ಲಿ ತೆರಳಿದ್ದಾರೆ ಎಂದು ತಿಳಿದುಬಂದಿದೆ.ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.
50 ವರ್ಷ ಮೀರದ ಮಹಿಳೆಯರು ಪ್ರವೇಶಿಸಿದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ಬಂದ್ ಮಾಡಲಾಗಿದೆ. ಸಂಪ್ರದಾಯಕ್ಕೆ ಅಡ್ಡಿಯಾಗಿದೆ ಎಂದು ಹೇಳಿ ಅರ್ಚಕರು ದೇವಾಲಯವನ್ನು ಬಂದ್ ಮಾಡಿದ್ದಾರೆ.ಮಹಿಳೆಯರ ಪ್ರವೇಶದಿಂದ ದೇವಾಲಯ ಅಪವಿತ್ರಗೊಂಡಿದೆ. ಹೀಗಾಗಿ ಕಲಶ ಶುದ್ಧಿಗಾಗಿ ಬಂದ್ ಮಾಡಿದ್ದೇವೆ ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…