ಸುದ್ದಿ

ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

147

ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ.

ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಎಲ್ಲಾ ಸ್ತ್ರೀಯರಿಗೆ ಪ್ರವೇಶಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿಕೆ ನೀಡಿದೆ.

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕೊಡುವ ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 54 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರ ಪೀಠವು ಮರಪರಿಶೀಲನಾ ಅರ್ಜಿಯನ್ನು ಇಂದು ವಿಚಾರಣೆ ನಡೆದಿದರು.

ಕೇರಳ ಸರ್ಕಾರದ ಅಧೀನದಲ್ಲಿ ನಡೆಯುವ ಶಬರಿಮಲ ದೇವಸ್ಥಾನ ಮಂಡಳಿಯು 2018 ಸೆಪ್ಟೆಂಬರ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿತ್ತು. ಬಳಿಕ ನವೆಂಬರ್ ವರೆಗೆ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೇಳಿತ್ತು. ಆದರೆ ಈಗ ದೇವಸ್ಥಾನಕ್ಕೆ ಮಹಿಳೆಯರಿಗೆ ಯಾವುದೇ ವಯೋಮಿತಿ ಇಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗುತ್ತದೆ ಎಂದು ಒಪ್ಪಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…

  • ವ್ಯಕ್ತಿ ವಿಶೇಷಣ, ಸ್ಪೂರ್ತಿ

    ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.