ಸುದ್ದಿ

ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

41

ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.

ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು. ಅವರು ಯಾರು ಗೊತ್ತಾ ಎಂದು ಪ್ರಶ್ನಿಸಿದರು. ಇದಕ್ಕೆ ನಾನಾ ಹೆಸರುಗಳು ಬಂದರೂ ಯಾರೊಬ್ಬರು ಸರಿಯಾದ ಉತ್ತರ ನೀಡಲಿಲ್ಲ. ಆಗ ಸ್ವತಃ ಜೈ ಜಗದೀಶ್ ಅವರೇ ಶಂಕರ್​ನಾಗ್​ ಹೆಸರು ಹೇಳಿದಾಗ ಎಲ್ಲರೂ ಒಮ್ಮೆ ಬೆಕ್ಕಸ ಬೆರಗಾದರು.

ಅವರ ಮಾರ್ಕೆಟ್​ ಯಾವಾಗ ಬಿದ್ದಿತ್ತು ಸರ್​ ಎಂದು ಎಲ್ಲರೂ ಅಚ್ಚರಿಯಿಂದ ಕೇಳಿದಾಗ, ಸುಮಾರು ಮೂರು ವರ್ಷ ಶಂಕರ್​ನಾಗ್​ ಅವರಿಗೆ ಮಾರ್ಕೆಟ್​ ಇರಲಿಲ್ಲ. ಆಗ ಮೆಟಡೋರ್​ ವ್ಯಾನ್​ನಲ್ಲಿ ನಗರದ ಕ್ವೀನ್ಸ್ ಪ್ರತಿಮೆ ಬಳಿ ಕ್ಯಾಂಟಿನ್​ ರನ್​ ಮಾಡುತ್ತಿದ್ದರು. ಆದರೆ, ನಂತರದ ದಿನಗಳಲ್ಲಿ ಅವರೇ ಬಹುದೊಡ್ಡ ನಟನಾದರು ಎಂದು ತಿಳಿಸಿದರು. ಅವರ ಆದರ್ಶಗಳನ್ನು ಕೇಳಿದರೆ, ಇಂದಿಗೂ ರೋಮಾಂಚನವಾಗುತ್ತದೆ.

ಅಂದೇ ಮೆಟ್ರೋ ಪರಿಕಲ್ಪನೆಯನ್ನು ಮುಂದಿಟ್ಟಿದ್ದರಂತೆ, ಅವರ ಸ್ವಂತದ ಹಣದಲ್ಲಿ ವಿದೇಶಕ್ಕೆ ಹೋಗಿ ಮೆಟ್ರೋ ಬಗ್ಗೆ ತಿಳಿದುಕೊಂಡುಬಂದಿದ್ದರಂತೆ ಎಂದು ಸ್ಪರ್ಧಿಗಳು ಕೇಳಿದಾಗ ಜೈ ಜಗದೀಶ್​ ಹೌದು, ಮೆಟ್ರೋ ಜತೆಗೆ ನಂದಿ ಬೆಟ್ಟ ಕೆಳಗಿನವರೆಗೂ ರೋಪ್​ ವೇ ಮಾಡಲು ಯೋಜನೆ ಹಾಕಿಕೊಂಡಿದ್ದರು ಎಂಬ ಅಚ್ಚರಿಯ ವಿಚಾರಗಳನ್ನು ಬಹಿರಂಗಪಡಿಸಿದರು.ವಿಶೇಷ ಅಂದರೆ ಶಂಕರ್​ನಾಗ್​ ಅವರ ಕನಸಾಗಿದ್ದ ಮೆಟ್ರೊ ಇಂದು ಕ್ವೀನ್ಸ್​ ಪ್ರತಿಮೆಯ ಮಾರ್ಗದಲ್ಲೇ ಸಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…