ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.
ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು. ಅವರು ಯಾರು ಗೊತ್ತಾ ಎಂದು ಪ್ರಶ್ನಿಸಿದರು. ಇದಕ್ಕೆ ನಾನಾ ಹೆಸರುಗಳು ಬಂದರೂ ಯಾರೊಬ್ಬರು ಸರಿಯಾದ ಉತ್ತರ ನೀಡಲಿಲ್ಲ. ಆಗ ಸ್ವತಃ ಜೈ ಜಗದೀಶ್ ಅವರೇ ಶಂಕರ್ನಾಗ್ ಹೆಸರು ಹೇಳಿದಾಗ ಎಲ್ಲರೂ ಒಮ್ಮೆ ಬೆಕ್ಕಸ ಬೆರಗಾದರು.
ಅವರ ಮಾರ್ಕೆಟ್ ಯಾವಾಗ ಬಿದ್ದಿತ್ತು ಸರ್ ಎಂದು ಎಲ್ಲರೂ ಅಚ್ಚರಿಯಿಂದ ಕೇಳಿದಾಗ, ಸುಮಾರು ಮೂರು ವರ್ಷ ಶಂಕರ್ನಾಗ್ ಅವರಿಗೆ ಮಾರ್ಕೆಟ್ ಇರಲಿಲ್ಲ. ಆಗ ಮೆಟಡೋರ್ ವ್ಯಾನ್ನಲ್ಲಿ ನಗರದ ಕ್ವೀನ್ಸ್ ಪ್ರತಿಮೆ ಬಳಿ ಕ್ಯಾಂಟಿನ್ ರನ್ ಮಾಡುತ್ತಿದ್ದರು. ಆದರೆ, ನಂತರದ ದಿನಗಳಲ್ಲಿ ಅವರೇ ಬಹುದೊಡ್ಡ ನಟನಾದರು ಎಂದು ತಿಳಿಸಿದರು. ಅವರ ಆದರ್ಶಗಳನ್ನು ಕೇಳಿದರೆ, ಇಂದಿಗೂ ರೋಮಾಂಚನವಾಗುತ್ತದೆ.
ಅಂದೇ ಮೆಟ್ರೋ ಪರಿಕಲ್ಪನೆಯನ್ನು ಮುಂದಿಟ್ಟಿದ್ದರಂತೆ, ಅವರ ಸ್ವಂತದ ಹಣದಲ್ಲಿ ವಿದೇಶಕ್ಕೆ ಹೋಗಿ ಮೆಟ್ರೋ ಬಗ್ಗೆ ತಿಳಿದುಕೊಂಡುಬಂದಿದ್ದರಂತೆ ಎಂದು ಸ್ಪರ್ಧಿಗಳು ಕೇಳಿದಾಗ ಜೈ ಜಗದೀಶ್ ಹೌದು, ಮೆಟ್ರೋ ಜತೆಗೆ ನಂದಿ ಬೆಟ್ಟ ಕೆಳಗಿನವರೆಗೂ ರೋಪ್ ವೇ ಮಾಡಲು ಯೋಜನೆ ಹಾಕಿಕೊಂಡಿದ್ದರು ಎಂಬ ಅಚ್ಚರಿಯ ವಿಚಾರಗಳನ್ನು ಬಹಿರಂಗಪಡಿಸಿದರು.ವಿಶೇಷ ಅಂದರೆ ಶಂಕರ್ನಾಗ್ ಅವರ ಕನಸಾಗಿದ್ದ ಮೆಟ್ರೊ ಇಂದು ಕ್ವೀನ್ಸ್ ಪ್ರತಿಮೆಯ ಮಾರ್ಗದಲ್ಲೇ ಸಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….