ಸುದ್ದಿ

ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

94

ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ  “ಒಂದಾನೊಂದು ಕಾಲದಲ್ಲಿ”  ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರ‍ನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್  ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್  ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್  ಅಭಿನಯಿಸಿರುವ “ಒಂದು ಮುತ್ತಿನ ಕಥೆ”  ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು. 

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಸರ್ಕಾರಿ ಯೋಜನೆಗಳು

    ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಇಂದಿರಾ ಸಾರಿಗೆ ನಂತರ ಈಗ ಪಿಂಕ್ ಆಟೋಗಳು..!ತಿಳಿಯಲು ಈ ಲೇಖನ ಓದಿ..

    ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…