ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ ಪೀಠದ ಮೇಲೆ ಬೆಳ್ಳಿ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.
ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಗದ್ದುಗೆ ಪೀಠವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪೀಠದ ಕೆಳಭಾಗದಲ್ಲಿ ಶ್ರೀಗಳ ಪಾದುಕೆ, ಸ್ವಲ್ಪ ಮೇಲ್ಭಾಗದಲ್ಲಿ ಶಿವಲಿಂಗ ಈಗಾಗಲೇ ಪ್ರತಿಷ್ಠಾಪನೆ ಮಾಡಲಾಗಿತ್ತು. ಶಿವಲಿಂಗದ ಹಿಂಭಾಗದ ಮೇಲ್ಭಾಗದಲ್ಲಿ ಶ್ರೀಗಳ ಭಾವಚಿತ್ರ ಇರಿಸಲಾಗಿತ್ತು. ಈ ಭಾವ ಚಿತ್ರ ತೆರವುಗೊಳಿಸಿ ಅದರ ಜಾಗದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.
ಗದ್ದುಗೆ ಪೀಠದಲ್ಲಿ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆಯಾಗುತ್ತಿದ್ದಂತೆ ಸಾಕ್ಷಾತ್ ಶಿವಕುಮಾರ ಶ್ರೀಗಳೇ ಬಂದು ಕುಂತ ಅನುಭವ ಭಕ್ತಾಧಿಗಳಲ್ಲಿ ಕಂಡಿದೆ. ಇಂದು ಶ್ರೀಗಳು ಲಿಂಗೈಕ್ಯರಾಗಿ 1 ವರ್ಷವಾಗಿದೆ. ಹಾಗಾಗಿ ಶ್ರೀಮಠದ ಭಕ್ತರಾದ ದೆಹಲಿ ಮೂಲದ ಉದ್ಯಮಿ ಮುಕೇಶ್ ಗರ್ಗ್ ಭಕ್ತಿಪೂರ್ವಕವಾಗಿ ಸಮರ್ಪಿಸಿದ ಬೆಳ್ಳಿ ವಿಗ್ರಹ ಇದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಬೈಕ್ ರ್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…