ಸುದ್ದಿ

ಬಯಲಾಯ್ತು ಜೆಡಿಎಸ್ ಶಾಸಕ ಮಾತನಾಡಿರುವ ಆಡಿಯೋ..!ಆ ಆಡಿಯೋದಲ್ಲಿ ಮಾತನಾಡಿದ್ದು ಏನು ಗೊತ್ತಾ?

By admin

April 15, 2019

ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ.

ಈ ಆಡಿಯೋ ನೋಡಿ…

ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು ಬಸ್ಸಿನಲ್ಲಿ ಕರೆದುಕೊಂಡು ಬರುವುದಾಗಿ ಅವರು ಹೇಳಿದ್ದು, ಪ್ರಚಾರಕ್ಕೆ ಬಂದವರಿಗೆ ತಲಾ 500 ರೂ. ಕೊಡುತ್ತೇವೆ. ಕರೆದುಕೊಂಡು ಬಾ ಎಂದು ಶಿವರಾಮೇಗೌಡರು ತಿಳಿಸಿದ್ದಾರೆ.

ಪ್ರಚಾರಕ್ಕೆ ಬಂದವರಿಗೆ ಹಣಕಾಸಿನ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಅಪ್ಪಾಜಿ ಗೌಡರಿಗೆ ಕೊಡಲಾಗಿದೆ ಎಂದು ಮಾತನಾಡಿದ್ದಾರೆ. ಈ ಆಡಿಯೋ ವೈರಲ್ ಆಗಿದೆ.