ಸುದ್ದಿ

ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

161

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು ಮಗುವಾದ ಮೇಲೆ ಪತಿ ಜಾತಿಯೇ ಬರುತ್ತೆ ಹೊರತು ಆಕೆಯ ತಾಯಿಯ ಮನೆಯ ಜಾತಿಯಲ್ಲ. ಹೀಗಾಗಿ ರಾಜಕೀಯದಲ್ಲಿ ಜಾತಿಯನ್ನು ತರಬೇಡಿ. ನಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ಹಿಡಿದು ಜನರ ಮುಂದೆ ಮತ ಯಾಚಿಸಬೇಕು ಎಂದಿದ್ದಾರೆ.

ಕೆಲವರು ಜನರ ಭಾವನೆಗಳನ್ನು ಕೆರಳಿಸುವ ನಿಟ್ಟಿನಲ್ಲಿ ಈ ರೀತಿ ಜಾತಿ ರಾಜಕೀಯವನ್ನು ಮಾಡಲು ಮುಂದಾಗಿದ್ದು, ಯಾರೊಬ್ಬರೂ ಜಾತಿ ರಾಜಕೀಯ ಮಾಡಲು ಮುಂದಾಗಬಾರದು ಎಂದು ಸಲಹೆ ನೀಡಿದರು. ಈ ಬಾರಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದು, ಸರ್ಕಾರದ ಸಾಧನೆಗಳನ್ನು ಹೇಳಿ ಕೈ ಮುಗಿದು ಜನರ ಮುಂದೆ ಮತಯಾಚನೆ ಮಾಡಬೇಕು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.