ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ.

ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ ಸಿನಿಮಾ ಅವಕಾಶಗಳು ಕಡಿಮೆಯಾಯಿತು. ಇದಕ್ಕೆ ಖಂಡಿತ ವಿಷಾದವಿಲ್ಲ.

ಘಟನೆಯಿಂದಾಗಿ ಇಲ್ಲಿಯವರೆಗೂ ಯಾವುದೇ ಸಿನಿಮಾ ಅವಕಾಶ ಬಂದಿಲ್ಲ. ಇದರ ಬಗ್ಗೆ ನನಗೆ ಚಿಂತೆ ಇಲ್ಲ. ಈ ಒಂದು ವರ್ಷದಲ್ಲಿ ಕುಟುಂಬದ ಜೊತೆಗೆ ಕಾಲಕಳೆಯಲು ಅವಕಾಶ ಸಿಕ್ಕಿತು. ಮಗಳು ಹಾಗೂ ಪತಿಯ ಜೊತೆಗೆ ಸಂತೋಷವಾಗಿದ್ದೇನೆ ಎಂದರು. ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿಕೊಟ್ಟಿದೆ. ಪ್ರಶಸ್ತಿ ಬಂದಿರುವುದಕ್ಕೆ ಮತ್ತೆ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹೊಂದಿದ್ದೇನೆ.

ಮೀಟೂ ನಂತಹ ಪ್ರಕರಣಗಳಲ್ಲಿ ಸಾಕ್ಷಿ ಇರುವುದಿಲ್ಲ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಧೈರ್ಯದಿಂದ ಹೋರಾಡಬೇಕು ಎಂದು ತಿಳಿಸಿದರು. ಇದೇಕಾರ್ಯಕ್ರದಲ್ಲಿ ಮಾತನಾಡಿದ ಶ್ರುತಿ ಹರಿಹರನ್ ತಾಯಿ, ನಿಮಗೆ ಮೀಟೂ ಅನುಭವ ಆದರೆ ಸುಮ್ಮನೆ ಇರಬೇಡಿ. ಸುಂದರ ಚಪ್ಪಲಿ ಕೈಗೆ ಎತ್ತಿಕೊಳ್ಳಿ ಎಂದು ಸಂವಾದದಲ್ಲಿ ಸೇರಿದ್ದ ಮಹಿಳೆಯರಿಗೆ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.