ಸುದ್ದಿ

ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

158

ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ.

ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ ಸಿನಿಮಾ ಅವಕಾಶಗಳು ಕಡಿಮೆಯಾಯಿತು. ಇದಕ್ಕೆ ಖಂಡಿತ ವಿಷಾದವಿಲ್ಲ.

ಘಟನೆಯಿಂದಾಗಿ ಇಲ್ಲಿಯವರೆಗೂ ಯಾವುದೇ ಸಿನಿಮಾ ಅವಕಾಶ ಬಂದಿಲ್ಲ. ಇದರ ಬಗ್ಗೆ ನನಗೆ ಚಿಂತೆ ಇಲ್ಲ. ಈ ಒಂದು ವರ್ಷದಲ್ಲಿ ಕುಟುಂಬದ ಜೊತೆಗೆ ಕಾಲಕಳೆಯಲು ಅವಕಾಶ ಸಿಕ್ಕಿತು. ಮಗಳು ಹಾಗೂ ಪತಿಯ ಜೊತೆಗೆ ಸಂತೋಷವಾಗಿದ್ದೇನೆ ಎಂದರು. ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಬಂದಿದ್ದು ಹೆಚ್ಚು ಖುಷಿಕೊಟ್ಟಿದೆ. ಪ್ರಶಸ್ತಿ ಬಂದಿರುವುದಕ್ಕೆ ಮತ್ತೆ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹೊಂದಿದ್ದೇನೆ.

ಮೀಟೂ ನಂತಹ ಪ್ರಕರಣಗಳಲ್ಲಿ ಸಾಕ್ಷಿ ಇರುವುದಿಲ್ಲ. ಹೀಗಾಗಿ ಇಂತಹ ಪ್ರಕರಣಗಳಲ್ಲಿ ಧೈರ್ಯದಿಂದ ಹೋರಾಡಬೇಕು ಎಂದು ತಿಳಿಸಿದರು. ಇದೇಕಾರ್ಯಕ್ರದಲ್ಲಿ ಮಾತನಾಡಿದ ಶ್ರುತಿ ಹರಿಹರನ್ ತಾಯಿ, ನಿಮಗೆ ಮೀಟೂ ಅನುಭವ ಆದರೆ ಸುಮ್ಮನೆ ಇರಬೇಡಿ. ಸುಂದರ ಚಪ್ಪಲಿ ಕೈಗೆ ಎತ್ತಿಕೊಳ್ಳಿ ಎಂದು ಸಂವಾದದಲ್ಲಿ ಸೇರಿದ್ದ ಮಹಿಳೆಯರಿಗೆ ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…