ಸುದ್ದಿ

ನಡೆದಾಡುವ ದೇವರ ಆರೋಗ್ಯ ಗಂಭೀರ!ಚಿಕಿತ್ಸೆ ಫಲಕಾರಿ ಆಗತ್ತೋ ಇಲ್ವೋ ಎಂದ ಡಾ. ಪರಮೇಶ್?

125

ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್‍ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ.

ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ ಅವರು ಇದ್ದಾರೆ. ಹೀಗಾಗಿ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ಕೊಡುತ್ತಲೇ ಇದ್ದೇವೆ. ಸದ್ಯ ಬೇರೆ ವೈದ್ಯರು ಬಂದಿಲ್ಲ ಎಂದು ತಿಳಿಸಿದರು.

ಇನ್ನು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಶ್ರೀಗಳು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೆಳಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ.

ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆರ್ಯುವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಮಠಕ್ಕೆ ನಿಯೋಜನೆ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದರು. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿ, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ