ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ.
ತೂಕ ಹೆಚ್ಚಿಸಬೇಕಾದವರಿಗೆ ಸೀತಾಫಲ ಬಹಳ ಒಳ್ಳೆಯದು. ಜೇನುತುಪ್ಪ ಮತ್ತು ಸೀತಾಪಹಲದ ಮಿಶ್ರಣವನ್ನು ನಿಯಮಿತವಾಗಿ ಸೇವಿಸಿದಾಗ ಅಗತ್ಯವಾದ ತೂಕ ಮತ್ತು ಹೆಚ್ಚು ಅಗತ್ಯವಿರುವ ಕ್ಯಾಲೊರಿಗಳನ್ನು ದೇಹಕ್ಕೆ ಸೇರಿಸಲು ಸಹಾಯ ಮಾಡುತ್ತದೆ. ಇಷ್ಟೇ ಅಲ್ಲದೆ ಆರೋಗ್ಯಕರ ಚರ್ಮ ಮತ್ತು ಕೂದಲು, ರಕ್ತದೊತ್ತಡವನ್ನು ನಿಯಂತ್ರಿಸಲು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ರಕ್ತಹೀನತೆಗೆ ಚಿಕಿತ್ಸೆಗೆ ಇದು ಬಹಳ ಉಪಕಾರಿ. ಈ ಹಣ್ಣಿನಲ್ಲಿರುವ ಜೀವರಕ್ಷಕ ಪೋಷಕಾಂಶಗಳಿಗೆ ಸ್ಥೂಲದೇಹ ನಿವಾರಕ, ಮಧುಮೇಹ ನಿವಾರಕ ಮತ್ತು ಕ್ಯಾನ್ಸರ್ ನಿವಾರಕ ಗುಣಗಳಿವೆ. ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸೀತಾಫಲ ಅದ್ಭುತವಾದ ಆರೈಕೆಯನ್ನು ನೀಡುತ್ತದೆ. ಸೀತಾಫಲದಲ್ಲಿ ಹೆಚ್ಚಿನ ಕ್ಯಾಲೋರಿಗಳಿವೆ ಹಾಗೂ ರಕ್ತದಲ್ಲಿ ಹೀಮೋಗ್ಲೋಬಿನ್ ಅಂಶವನ್ನು ಹೆಚ್ಚಿಸಲು ನೆರವಾಗುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಅಗತ್ಯಕ್ಕೂ ಕಡಿಮೆ ಇದ್ದರೆ ಸೀತಾಫಲದ ನಿಯಮಿತ ಸೇವನೆ ತೂಕವನ್ನು ಹೆಚ್ಚಿಸಲು ನೆರವಾಗುತ್ತದೆ.
ಸೀತಾಫಲದಲ್ಲಿರುವ ಮೆಗ್ನಿಶಿಯಂ ಅಂಶ, ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿರುವ ಹೃದಯಾಘಾತ ಹಾಗು ಕಾರ್ಡಿಯಲ್ ಅರೆಸ್ಟ್ ಹೀಗೆ ಹೃದಯಕ್ಕೆ ಸಂಬಂಧಪಟ್ಟ ಎಲ್ಲಾ ಭಯಾನಕ ತೊಂದರೆಗಳಿಂದ ದೂರವಿರಲು ಸಹಾಯ ಮಾಡುತ್ತದೆ. ಸೀತಾಫಲದ ನಿಯಮಿತ ಸೇವನೆಯಿಂದ ತ್ವಚೆಯ ಸೆಳೆತ ಹೆಚ್ಚುತ್ತದೆ ಹಾಗೂ ಕಾಂತಿಯುಕ್ತವಾಗುತ್ತದೆ. ಪರಿಣಾಮವಾಗಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಉಡುಗುತ್ತದೆ. ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುವ ಮೂಲಕ ಆರೋಗ್ಯಕರ ಮತ್ತು ಕಾಂತಿಯುಕ್ತ ಹಾಗೂ ಕಲೆಯಿಲ್ಲದ ತ್ವಚೆಯನ್ನು ಪಡೆಯಲು ನೆರವಾಗುತ್ತದೆ. ಹೇಳುತ್ತಾ ಹೋದರೆ ಈ ಅದ್ಬುತ ಸೀತಾಫಲದ ಬಗ್ಗೆ ದೊಡ್ಡ ಪುಸ್ತಕವನ್ನೇ ಬರೆಯಬಹುದು, ಹೀಗಾಗಿ ಈ ವಿಷಯ ನಿಮ್ಮವರಿಗೂ ತಿಳಿಸಿ.